ಬೆಂಗಳೂರು: ಇಂದು ಬೆಳಿಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಇದ್ಯಾಕೆ ಹೀಗಿದೆ ಎನ್ನುವವರಿಗೆ ಹವಾಮಾನ ಇಲಾಖೆ ಉತ್ತರ ನೀಡಿದೆ.
ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡಿದ್ದರಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಎರಡು ದಿನಗಳ ಕಾಲ ಸಂಜೆ ವೇಳೆಗೆ ಸಣ್ಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎರಡು ವಾರಗಳ ಹಿಂದಷ್ಟೇ ರಾಜ್ಯಾದ್ಯಂತ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಭಾರೀ ಮಳೆಯಾಗಿ ತಂಪೆರಚಿತ್ತು. ಇದೀಗ ಮತ್ತೆ ಮಳೆಯಾಗುವ ಸಾಧ್ಯತೆಯಿದ್ದು, ಬೇಸಗೆಯ ಬಿರು ಬಿಸಿಲಿಗೆ ಕೊಂಚ ವಿರಾಮ ಸಿಗುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ