ಮಾಜಿ ಸಚಿವ ಗಾಲಿ ಜರ್ನಾರ್ದನ ರೆಡ್ಡಿ ಅವರ ಕಚೇರಿಯ ಮೇಲೆ ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಎರಡು ಇನೋವಾ ಕಾರ್‌ಗಳಲ್ಲಿ ಆಗಮಿಸಿದ ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗಾಲಿ ಜರ್ನಾರ್ದನ ರೆಡ್ಡಿ ಅವರ ಒಎಂಸಿ ಹಾಗೂ ಎಎಂಸಿ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಕಪ್ಪು ಹಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಸಮರಸಾರಿದ್ದ ಬೆನ್ನಲ್ಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ತಮ್ಮ ಪುತ್ರಿಯ ವಿವಾಹವನ್ನು ಮಾಡಿದ್ದರು. ಈ ಅದ್ದೂರಿ ವಿವಾಹ ರಾಜ್ಯ ಸಭೆ ಹಾಗೂ ಲೋಕಸಭೆಯಲ್ಲಿ ಚರ್ಚೆಗೂ ಸಹ ಬಂದಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ