Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾಂಗ್ರೆಸ್ ಮುಖಂಡರಿಗೆ ಐಟಿ ದಾಳಿಯ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಇಲಿಯಾಸ್ ಬಾಗವಾನ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ಇಲಿಯಾಸ್ ಬಾಗವಾನ್ ನಿವಾಸದ ಮೇಲೆ ನಿನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಕೂಡಾ ದಾಳಿ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ನಗರದ ಹುಸೇನ್‌ಗಾರ್ಡನ್‌ನಲ್ಲಿರುವ ಇಲಿಯಾಸ್ ಬಾಗವಾನ್ ನಿವಾಸದ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಐಟಿ ದಾಳಿಯಲ್ಲಿ ಹಣ ಮತ್ತು ಆಸ್ತಿಪಾಸ್ತಿ ದಾಖಲೆಗಳು ಪತ್ತೆಯಾಗಿವೆಯೋ ಇಲ್ಲವೋ ಎನ್ನುವ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.