Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಡಿ.ಕೆ. ಶಿವಕುಮಾರ್ ಅವರ ಮನೆ ಮೇಲಿನ ಐಟಿ ದಾಳಿ ಬಳಿಕ ಇದೀಗ ಡಿ.ಕೆ. ಶಿವಕುಮಾರ್ ಆಪ್ತ ವಿಜಯ್ ಮುಳಗುಂದ ಮನೆ ಮೇಲೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ರಾಜಾಜಿನಗರದ 2ನೇ ಹಂತದಲ್ಲಿರುವ ವಿಜಯ್ ಮುಳಗುಂದ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯ್ ಮುಳಂಗುಂದ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್ ಮುಖ್ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಪರಿಚಯವಾಗಿದ್ದರು. ಅಂದಿನಿಂದ ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಗುಜರಾತ್ ರಾಜ್ಯಸಭಾ ಚುನಾವಣೆ ಸಂದರ್ಭ ಆಪರೇಶನ್ ಕಮಲದಿಂದಾಗಿ 41 ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಆಗಮಿಸಿದ್ದರು. ಈ ಸಂದರ್ಭ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಸಂಬಂಧಿಕರ ಮನೆ ಮೇಲೆ ಐಟಿ ದಾಳಿ ನಡೆದಿತ್ತು.
ಕಳೆದ ತಿಂಗಳಿಂದೀಚೆಗೆ ಕಾಂಗ್ರೆಸ್ ನಾಯಕರ ಮೇಲೆ ನಡೆದ 2ನೇ ಐಟಿ ದಾಳಿ ಇದಾಗಿದೆ. 10 ಐಟಿ ಅಧಿಕಾರಿಗಳು ವಿಜಯ್ ಮುಳಗುಂದ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
.