ಐಟಿ ಅಧಿಕಾರಿಗಳಿಗೆ ದಾಳಿ ಮಾಡಲು ಸಂಪೂರ್ಣ ಅಧಿಕಾರವಿದೆ. ಆದರೆ, ಕೇಂದ್ರ ಸರಕಾರ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸುತ್ತಿದೆ. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಜಿಲ್ಲಾ ಕ್ರೀಡಾಂಗಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ. ಈ ಕುರಿತು ರಾಜ್ಯಪಾಲರು ಸ್ಪಷ್ಟಿಕರಣ ಕೇಳಿದ್ದು, ರಾಜ್ಯ ಸರಕಾರ ಸ್ಪಷ್ಟಿಕರಣ ನೀಡಲಿದೆ ಎಂದರು.
ನಾಗರಿಕ ಸಾಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವುದು ಖಂಡನೀಯ. ಮಹಿಳೆಯರ ಮೇಲಿನ ದೌರ್ಜನ್ಯ ಪೈಶಾಚಿಕ ಕೃತ್ಯವಾಗಿದ್ದು, ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ರಾಜ್ಯ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಬಿಜೆಪಿಯವರು ಆಂತರಿಕ ಕಚ್ಚಾಟವನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನರ ಮುಂದೆ ಬರುವುದಿಲ್ಲ. ನಮ್ಮ ಸರಕಾರದ ಸಾಧನೆಗಳ ಆಧಾರದ ಮೇಲೆ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ