ಬೆಂಗಳೂರು : ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ಅಶ್ಲೀಲ ನೃತ್ಯ ಮಾಡಿಸಿ ಅಕ್ರಮವಾಗಿ ಡಿಸ್ಕೋಥೆಕ್ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುದೇಶ್ ಈ ದಂಧೆ ನಡೆಸುತ್ತಿದ್ದ ಆರೋಪಿ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರ್ಟ್ ಆಫ್ ಪೆವಿಲಿಯನ್ ಅಂಡ್ ರೆಸ್ಟೋರೆಂಟ್ನಲ್ಲಿ ಡಿಸ್ಕೋಥೆಕ್ ನಡೆಸುತ್ತಿದ್ದ ಈತ ಪರವಾನಗಿ ನಿಬಂಧನೆಗಳನ್ನು ಉಲ್ಲಂಘನೆ ಮಾಡಿ ಅಕ್ರಮವಾಗಿ ಮಹಿಳೆಯರನ್ನು ಇರಿಸಿಕೊಂಡು ಅವರಿಂದ ಅಶ್ಲೀಲ ನೃತ್ಯ ಮಾಡಿಸುತ್ತಿದ್ದ. ಅಷ್ಟೇ ಅಲ್ಲದೇ ಡಿಸ್ಕೋಥೆಕ್ಗೆ ಬರುವವರಿಗೆ ಕಪಲ್ ಎಂಟ್ರಿ ಹೆಸರಿನಲ್ಲಿ ಹುಡುಗಿಯರ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಡಿಸ್ಕೋಥೆಕ್ನಲ್ಲಿದ್ದ 83 ಜನರನ್ನು ವಶಕ್ಕೆ ಪಡೆದು, 28 ಮಹಿಳೆಯರನ್ನು ರಕ್ಷಿಸಲಾಗಿದೆ. ದಾಳಿಯಲ್ಲಿ 2,41,550 ರೂಪಾಯಿ ಜಪ್ತಿ ಮಾಡಿಕೊಳ್ಳಲಾಗಿದೆ ೆಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.