ದಕ್ಷಿಣ ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ. ಕಡಿಮೆ ಒತ್ತಡದ ರೂಪುಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮೋಡ ಕವಿದ ವಾತಾವರಣಿದೆ. ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಡಿಸೆಂಬರ್ 5ರ ವರೆಗೆ ಇದೇ ವಾತಾರಣ ಮುಂದುವರಿಯಲಿದೆ. ಇದರ ಜೊತೆಗೆ ಮಳೆಯ ಸಾಧ್ಯತೆಯೂ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ.