Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ಇಬ್ಬರು ಹಿಂದೂ ಕಾರ್ಯಕರ್ತರು ಅರೆಸ್ಟ್

Ivan Dsouza

Sampriya

ಮಂಗಳೂರು , ಬುಧವಾರ, 28 ಆಗಸ್ಟ್ 2024 (17:47 IST)
ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲಿನ ಕಲ್ಲು ತೂರಾಟ ಪ್ರಕರಣ ಸಂಬಂಧ ಇಬ್ಬರು ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರನ್ನು ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಎಂದು ಗುರುತಿಸಲಾಗಿದೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ವಿರೋಧಿಸಿ ಮಂಗಳೂರಿನಲ್ಲಿ ಈಚೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ವೇಳೆ ಐವನ್ ಡಿಸೋಜಾ ಅವರ ಪ್ರಚೋದನಕಾರಿ ಹೇಳಿಕೆಗೆ ಬಿಜೆಪಿ ಆಕ್ರೋಶ ಹೊರಹಾಕಿತ್ತು.

ಈ ಹೇಳಿಕೆ ಬೆನ್ನಲ್ಲೇ ಆಗಸ್ಟ್ 20ರ ತಡರಾತ್ರಿ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆದಿತ್ತು. ಸಿಸಿಟಿವಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಐವನ್ ಮನೆ ಮೇಲೆ ಕಲ್ಲು ತೂರಾಟ ಮಾಡಿರುವುದು ಸೆರೆಯಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಿ ಪಾಂಡೇಶ್ವರ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರಿಬ್ಬರೂ ವಿಹೆಚ್‌ಪಿ, ಬಜರಂಗದಳದ ಕಾರ್ಯಕರ್ತರಾಗಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗವರ್ನರ್ ತೆರಳಿದ ಬಳಿಕ ಭೈರತಿ ಸುರೇಶ್ ಪುತ್ರನ ನಿಶ್ಚಿತಾರ್ಥಕ್ಕೆ ಸಿಎಂ ಸಿದ್ದರಾಮಯ್ಯ ಹಾಜರ್