ಪಿಎಸ್‌ಐ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತನನ್ನು ಪೊಲೀಸರು ಬಂಧಿಸಿದ್ದಾರೆ.
ಸೆಪ್ಟೆಂಬರ್ 15 ರಂದು ಕಿಲ್ಲೆ ಮೈದಾನದಲ್ಲಿ ಜಗದೀಶ್ ಕಾರಂತ, ಪಿಎಸ್‌ಐ ಖಾದರ್‌ನನ್ನು ಯಾಕೆ ಬೆತ್ತಲೆ ಓಡಿಸಬಾರದು. ಆತನ ತಲೆಯ ಬೋಳಿಸಿ, ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಿಸಿದಲ್ಲಿ ಲೆಕ್ಕವೇ ಅಲ್ಲ ಎನ್ನುವ ಅವಹೇಳನಕಾರಿ ಹೇಳಿಕೆ ನೀಡಿ ಉದ್ಧಟತನ ಮೆರೆದಿದ್ದರು.
ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅಸಭ್ಯ ಪದಗಳನ್ನು ಬಳಸಿದ್ದಕ್ಕಾಗಿ ಜಗದೀಶ್ ಕಾರಂತ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಜಗದೀಶ್ ಕಾರಂತ ಇಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪುತ್ತೂರು ನಗರ ಠಾಣೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾರಂತ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಪುತ್ತೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.