Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸೇರದೇ ಇರಲು ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀರ್ಮಾನಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಪಕ್ಷದೊಳಗೆ ಕೆಲಸ ಮಾಡಲು ನಿರ್ಧರಿಸಿದ್ದು, ಯಾವುದೇ ಸಚಿವ ಸ್ಥಾನ ಆಕಾಂಕ್ಷಿಯಲ್ಲ ಎಂದರು.
ಪಕ್ಷದಲ್ಲಿ ನಾನು ತಳಮಟ್ಟದಲ್ಲಿ ಮೇಲಿನ ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನಾನು ಯಾವುದೇ ಸ್ಥಾನಮಾನ ಅಪೇಕ್ಷಿಸುತ್ತಿಲ್ಲ. ನನ್ನ ಈ ನಿರ್ಧಾರ ವೈಯಕ್ತಿಕವಾಗಿದ್ದು, ಯಾರ ಒತ್ತಡವೂ ಇಲ್ಲ ಎಂದು ಅವರು ಹೇಳಿದರು.
ಇತ್ತೀಚೆಗೆ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡೀಯೋದಲ್ಲಿ ಶೆಟ್ಟರ್ ಅವರಿಗೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ವಿವಾದದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.