Publish Date: Tue, 11 Jul 2023 (07:34 IST)
Updated Date: Tue, 11 Jul 2023 (07:01 IST)
ಬೆಳಗಾವಿ : ಹಿರೇಕೋಡಿಯ ಜೈನ ಮುನಿಗಳ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದುರ್ಘಟನೆ ನಡೆಯಬಾರದಿತ್ತು. ಇದರಿಂದ ನನಗೆ ಬಹಳ ನೋವಾಗಿದೆ. ಒಬ್ಬ ಸ್ವಾಮೀಜಿ, ಸಂತ ಯಾವುದೇ ಅಪೇಕ್ಷೆ ಇಲ್ಲದೇ ಜೀವನ ನಡೆಸುತ್ತಾರೆ. ಅಂಥವರಿಗೆ ಯಾವುದೇ ಕಾರಣಕ್ಕೂ ಹೀಗೆ ಆಗಬಾರದು ಎಂದಿದ್ದಾರೆ.
ನಮ್ಮ ರಾಜ್ಯದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಬಂಧಿಸಿತರ ವಿರುದ್ಧ ಈಗಾಗಲೇ ತನಿಖೆ ಆರಂಭವಾಗಿದೆ. ಯಾರೂ ಉದ್ರೇಕಗೊಳ್ಳಬಾರದು. ಎಲ್ಲವನ್ನೂ ಕಾನೂನು ನೋಡಿಕೊಳ್ಳಲಿದೆ ಎಂದಿದ್ದಾರೆ.