ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಆಗುತ್ತಿದೆ. ಬಂಟ್ವಾಳ್ ಬಾಗಶಃ ಮುಳುಗಡೆ ಆಗಿದೆ.
ಬಂಟ್ವಾಳ್ ದಲ್ಲಿರುವ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರ ಮನೆ ಜಲಾವೃತವಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇದೇ ವೇಳೆ ಪಾಣೆ-ಮಂಗಳೂರು ಬಳಿ ವ್ಯಕ್ತಿಯೊಬ್ಬರು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ ಯು. ಟಿ. ಖಾದರ್ ಉಳ್ಳಾಲದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆರೆಯಿಂದ ತೊಂದರೆಗೊಳಗಾದ ಜನರಿಗೆ ನೆರವಿಗೆ ಧಾವಿಸಿದ್ದಾರೆ. ಇದೇ ವೇಳೆ ಗುರುಪುರ ಹಾಗೂ ಪಲ್ಗುಣಿ ನದಿ ನೀರಿನ ಮಟ್ಟ ಏರಿಕೆ ಆಗುವುದರಿಂದ ನದಿ ತೀರದ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮನವಿ ಮಾಡಿದ್ದಾರೆ.
ಶಿರಾಡಿ ಘಾಟ್, ಚಾರ್ಮಾಡಿ ಹಾಗೂ ಸಂಪಾಜೆ ಘಾಟ್ ರಸ್ತೆ ಬಂದ್ ಆಗಿರುವುದರಿಂದ ಮಂಗಳೂರು - ಬೆಂಗಳೂರು ಸಂಪರ್ಕ ಬಂದ್ ಆಗಿದೆ.