ಜಂತಕಲ್ ಮೈನಿಂಗ್ ಪ್ರಕರಣ ನಡೆದೇ ಇಲ್ಲ. ಅಂದ ಮೇಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಯಾವ ರೀತಿ ಸಾಕ್ಷ್ಯಗಳನ್ನು ನೀಡುತ್ತಾರೆ ಎಂದು ಲೇವಡಿ ಮಾಡಿದರು.
11 ವರ್ಷಗಳಿಂದ ಸಾಕ್ಷ್ಯಗಳನ್ನು ಕಾಪಾಡಿಕೊಂಡಿದ್ದಾರಂತೆ. 150 ಕೋಟಿ ರೂಪಾಯಿ ಹಗರಣ ನಡೆದೇ ಇಲ್ಲ. ಇದೊಂದು ಬಿಜೆಪಿಯವರು ನನ್ನ ವಿರುದ್ಧ ನಡೆಸುತ್ತಿರುವ ಕುತಂತ್ರವಾಗಿದೆ ಎಂದು ತಿರುಗೇಟು ನೀಡಿದರು.
ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದಕ್ಕೆ ಹೆದರಬೇಕಾಗಿಲ್ಲ. ಇಲ್ಲಿಯವರೆಗೆ ಕೋರ್ಟ್ ತಾತ್ಕಾಲಿಕ ಜಾಮೀನು ನೀಡಿತ್ತು ಇದೀಗ ತಾತ್ಕಾಲಿಕ ಜಾಮೀನು ಅಗತ್ಯವಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ. ಅದಕ್ಕೆ ಹೆದರಬೇಕಾಗಿಲ್ಲ. ನಮ್ಮ ವಕೀಲರ ಸಲಹೆಯಂತೆ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಹಾಜರಾದ ಮಾಜಿ ಸಚಿವ ಜನಾರ್ದನ ರೆಡ್ಡಿ, ಕುಮಾರಸ್ವಾಮಿ ವಿರುದ್ಧದ ದಾಖಲೆಗಳನ್ನು ನೀಡಿದ್ದಾರೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.