ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿಗೆ ನ್ಯಾಯಾಲಯದಿಂದ ಮತ್ತೆ ರಿಲೀಫ್ ದೊರೆತಿದೆ.
ಜಾಮೀನು ಅರ್ಜಿಯನ್ನು ಜೂನ್ 28ಕ್ಕೆ ಮುಂದೂಡಿದ ಕೋರ್ಟ್, ಜೂನ್ 28 ರವರೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸಿದಂತೆ ಹೈಕೋರ್ಟ್ ತಡೆ ನೀಡಿದೆ.
ಕುಮಾರಸ್ವಾಮಿ ಪರ ಹಷ್ಮತ್ ಭಾಷಾ ನ್ಯಾಯಾಲಯದಲ್ಲಿ ವಾದ ಮಂಡಿಸಿ, ಜಂತಕಲ್ ಮೈನಿಂಗ್ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಆರಂಭದಲ್ಲಿ ಕುಮಾರಸ್ವಾಮಿಯವರನ್ನು ಸಾಕ್ಷಿಯನ್ನಾಗಿ ಪರಿಗಣಿಸಿದರು. ಇದೀಗ ಮೂರನೇ ಆರೋಪಿ ಎಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಬಂಧಿಸುವ ಅಧಿಕಾರವಿರುವುದರಿಂದ ಕುಮಾರಸ್ವಾಮಿಯವರಿಗೆ ಜಾಮೀನು ಕೊಡಬೇಕು ಎಂದು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಜೂನ್ 28 ರವರೆಗೆ ಕುಮಾರಸ್ವಾಮಿಯವರನ್ನು ಬಂಧಿಸದಂತೆ ಆದೇಶ ನೀಡಿದೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.