ಮಂಡ್ಯ : ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡುತ್ತಿದ್ದ ಸಿಎಂ ಕುಮಾರಸ್ವಾಮಿ ಎದುರಲ್ಲೇ ಕಬ್ಬಿನ ಬಾಕಿ ಹಣ ಕೇಳಿದ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಗುರುವಾರ ರಾತ್ರಿ ಸಿಎಂ ಕುಮಾರಸ್ವಾಮಿ ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ರೈತ ರವಿ ಅವರು, ಕಾರ್ಖಾನೆಗೆ ಕಬ್ಬು ಸಾಗಿಸಿ 6 ತಿಂಗಳಾಗಿವೆ. ಇನ್ನೂ ಹಣ ಬಂದಿಲ್ಲ. ನೀವು ಕಬ್ಬಿನ ದರ ನಿಗದಿ ಮಾಡಿಲ್ಲ. ಭತ್ತ ಖರೀದಿ ಕೇಂದ್ರ ತೆರೆದಿಲ್ಲ, ಕೇಂದ್ರದಿಂದಲೂ ಹಣ ಬಂದಿಲ್ಲ. ರೈತರ ರಕ್ಷಣೆ ಮಾಡುವ ಮೊದಲು ಈ ಕೆಲಸ ಮಾಡಿ ಎಂದು ಹೇಳಿದ್ದಾರೆ.
ಆಗ ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಚುನಾವಣೆ ಮುಗಿದ ತಕ್ಷಣ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಪ್ರಚಾರಕ್ಕೆ ಬಂದಿರುವ ಸಿಎಂ ಅವರನ್ನೇ ಪ್ರಶ್ನಿಸುತ್ತಿಯಾ ಎಂದು ಜೆಡಿಎಸ್ ಕಾರ್ಯಕರ್ತರು ರೈತ ರವಿಯನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಇದನ್ನು ನೋಡಿದ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡದೆ ಮುಂದಿನ ಗ್ರಾಮಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.