Publish Date: Thu, 14 Sep 2017 (19:19 IST)
Updated Date: Thu, 14 Sep 2017 (19:21 IST)
ಜೆಡಿಎಸ್ ಪಕ್ಷದ ಮುಖಂಡರು ಮುಸ್ಲಿಂ ಸಮುದಾಯದ ವಿರೋಧಿಯಾಗಿದ್ದಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರು ಮುಸ್ಲಿಂ ಸಮುದಾಯವನ್ನು ಕೆಲ ಮಟ್ಟಿಗೆ ಸಹಿಸಿಕೊಂಡು ನಂತರ ತುಳಿದು ಬಿಡ್ತಾರೆ. ಜೆಡಿಎಸ್‌ನಿಂದ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಗುಡುಗಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಮುಂಬರುವ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷವೇ ಮತ್ತೆ ಸರಕಾರ ರಚಿಸಲಿದೆ. ಮಿಷನ್ 150 ಬಿಜೆಪಿಯದಲ್ಲ, ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಮುಸ್ಲಿಂ ಸಮುದಾಯದವರು ನನ್ನ ಕೈ ಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.