Publish Date: Mon, 06 Dec 2021 (17:01 IST)
Updated Date: Mon, 06 Dec 2021 (16:01 IST)
ವಿಧಾನ ಪರಿಷತ್ ಚುನಾವಣೆಯಲ್ಲಿ ಮತ್ತೊಂದು ರಾಜಕೀಯ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾಳೆ ಜೆಡಿಎಸ್ ನಿರ್ಧಾರ ಪ್ರಕಟವಾಗಲಿದೆ. ವಿಧಾನ ಪರಿಷತ್ ಚುನಾವಣೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಪಕ್ಷದ ಕಚೇರಿಯಲ್ಲಿ ನಿರ್ಧಾರ ಪ್ರಕಟಿಸಲಿದ್ದು,
ಮೈತ್ರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಈಗಾಗಲೇ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.ಸ್ಥಳೀಯ ಸಂಸ್ಥೆಗಳ 25 ಸ್ಥಾನಗಳಿಗೆ ಡಿ.10ರಂದು ಮತದಾನ ನಡೆಯಲಿದ್ದು, ಮೈತ್ರಿ ಮಾಡಿಕೊಳ್ಳಬೇಕೇ ಅಥವಾ ಏಕಾಂಗಿ ಹೋರಾಟ ನಡೆಸಬೇಕೆ ಎಂಬ ಬಗೆಗಿನ ನಿರ್ಧಾರವನ್ನು ನಾಳೆ ಪ್ರಕಟಿಸಲಾಗುತ್ತದೆ ಎನ್ನಲಾಗಿದೆ.
geetha
Publish Date: Mon, 06 Dec 2021 (17:01 IST)
Updated Date: Mon, 06 Dec 2021 (16:01 IST)