Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
'ಬಿಜೆಪಿಯ ಬಿ ಟೀಂ ಜೆಡಿಎಸ್‌ಗೆ ಯಾವುದೇ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಬಾರದು. ಯಾವಾಗಲೂ ಹೊಂದಾಣಿಕೆಗೆ ಕಾಯುತ್ತಿರುತ್ತಾರೆ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್‌ನ್ನು ಟೀಕಿಸಿದ್ದಾರೆ. 'ಜೆಡಿಎಸ್‌ನವರು 30 ಸ್ಥಾನ ಗೆದ್ದರೆ ಸಾಕು ಅಂತಾರೆ. ಹಿಂದೆ ಉತ್ತಮ ಆಡಳಿತ ನೀಡಲಿ ಎಂಬ ಕಾರಣಕ್ಕೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಯಿತು. ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ; ಧೀರನೂ ಅಲ್ಲ ಎಂಬಂತೆ ನನ್ನಿಂದ ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು ಎಂದು ಆರೋಪ ಮಾಡಿದ್ದಾರೆ. 'ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಏಕೆ ಬಂಧಿಸಬೇಕು? ಹಿಂದೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿಯೂ ಹೀಗೆ ಮಾಡಿದ್ದೀರಾ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಾರೆ. ಇದಕ್ಕೆ ಜೆಡಿಎಸ್ ಬಿಜೆಪಿಯ ಬಿ.ಟೀಂ ಎನ್ನುವುದು' ಎಂದು ವ್ಯಂಗ್ಯವಾಡಿದರು.