ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್- ಜೆಡಿಎಸ್ ನಡುವೆ ಗುದ್ದಾಟಗಳು ಶುರುವಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ದೇವೇಗೌಡರು, ಸರ್ಕಾರ ಸುಗಮವಾಗಿ ನಡೆಸುವುದಕ್ಕೆ ಸಿದ್ದರಾಮಯ್ಯ ಅಡ್ಡಿಯಾಗಿದ್ದಾರೆ. ಸಂಪುಟ ಪುನರ್ ರಚನೆಗೆ ಸಿದ್ದರಾಮಯ್ಯ ಕಿರಿಕ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನಿಲುವಿನಿಂದಾಗಿ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಪರಿಸ್ಥಿತಿ ನಿಯಂತ್ರಿಸದಿದ್ದರೆ ಮೈತ್ರಿ ಅಂತ್ಯ ಆಗಲಿದೆ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ದೇವೇಗೌಡರು ಕಾಂಗ್ರೆಸ್ ನ ಹಿರಿಯ ಮುಖಂಡ ಅಹ್ಮದ್ ಪಟೇಲ್ ಜೊತೆಯೂ ಚರ್ಚಿಸಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ.