ಬೆಂಗಳೂರು: ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಜೆಡಿಎಸ್ ನ್ನು ಹಿಗ್ಗಾ ಮುಗ್ಗಾ ಹೀಯಾಳಿಸದ ಮೇಲೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಚುನಾವಣೆಯಲ್ಲಿ ಮತ್ತು ನಂತರ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಕ್ಕೆ ಒಲವು ತೋರಿದ್ದಾರೆ.
ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆ ಬಿಜೆಪಿಯನ್ನು ಅಧಿಕಾರದಿದ ದೂರವಿಡಲು ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಿ ಎಂದು ಮನವಿ ಸಲ್ಲಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಗೌಡರು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.
ನೀವು ಒಳ್ಳೆಯ ಉದ್ದೇಶದಿಂದ ಬಂದಿದ್ದೀರಿ. ನಿಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ದೇವೇಗೌಡರು ಸಂಘಟನೆಯ ಸದಸ್ಯರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆ ಮೂಲಕ ಕಾಂಗ್ರೆಸ್ ಜತೆಗಿನ ಮೈತ್ರಿ ಸಲಹೆಗೆ ಗೌಡರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ