ರಾಮನಗರ: ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಾಲಾ ಕುಮಾರಸ್ವಾಮಿ ಎಂದು ಕರೆದು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು, ಜಮೀರ್ ಅಹ್ಮದ್ ಖಾನ್ "ಕಾಲಾ ಕುಮಾರಸ್ವಾಮಿ" (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ.
ಜಮೀರ್ ಅಹ್ಮದ್ ಹೇಳಿಕೆ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದೆ. ಕೂಡಲೇ ಗೃಹ ಸಚಿವರಾದ ಡಾ.ಪರಮೇಶ್ವರ್ ಅವರು ಜಮೀರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಈ ಬಗ್ಗೆ ಜೆಡಿಎಸ್ ತನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರನ್ನು, ಜಮೀರ್ ಅಹ್ಮದ್ ಖಾನ್ "ಕಾಲಾ ಕುಮಾರಸ್ವಾಮಿ" (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ.
ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್ ಅಹ್ಮದ್ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ. ಅಪರಾಧ.
ಈ ಕೂಡಲೇ ಗೃಹ ಸಚಿವರಾದ ಡಾ.ಪರಮೇಶ್ವರ್, ರಾಮನಗರ ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷವು ಆಗ್ರಹಿಸುತ್ತದೆ ಎಂದು ಬರೆದುಕೊಂಡಿದೆ.