ವಿಧಾನಪರಿಷತ್ ಸಬಾಪತಿ ಸ್ಥಾನಕ್ಕೆ ನಾಳೆಯೇ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು ಸಭಾಪತಿಯಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ವಿಧಾನಪರಿಷತ್‌ನಲ್ಲಿ ಮಂಡಿಸಲಾಗುತ್ತಿರುವ ಅವಿಶ್ವಾಸ ನಿರ್ಣಯಕ್ಕೆ ಗೆಲುವಾದಲ್ಲಿ ಹೊಸ ಸಭಾಪತಿಯನ್ನು ಆಯ್ಕೆ ಮಾಡಬೇಕಾಗುತ್ತದೆ. ಅಂತಹ ಸಂದರ್ಭ ಬಂದಲ್ಲಿ ಬಸವರಾಜ ಹೊರಟ್ಟಿಯವರಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ ಎನ್ನಲಾಗುತ್ತಿದೆ.
ಮುಂಬರುವ ಡಿಸೆಂಬರ್‌ವರೆಗೆ ಹೊರಟ್ಟಿಯವರನ್ನು ಸಭಾಪತಿಯಾಗಿ ಮುಂದುವರಿಸುವ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಜಿ,ಪರಮೇಶ್ವರ್ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಉಪಸಭಾಪತಿ ಸ್ಥಾನವನ್ನು ಪಡೆಯಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ನೂತನ ಸಭಾಪತಿ ಆಯ್ಕೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅಥವಾ ದೇವೇಗೌಡರಾಗಲಿ ಯಾವುದೇ ಬಹಿರಂಗ ಹೇಳಿಕೆ ನೀಡದಿರುವ ಹಿನ್ನೆಲೆಯಲ್ಲಿ ಉಹಾಪೋಹಗಳು ಹರಿದಾಡುತ್ತಿವೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.