ಜೆಡಿಎಸ್ ಪಕ್ಷದ ಹಿರಿಯ ನಾಯಕ ಮಾಜಿ ಶಾಸಕ ದಿನಕರ್ ಶೆಟ್ಟಿ ಜೆಡಿಎಸ್ಗೆ ಗುಡ್ಬೈ ಹೇಳಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ಕ್ಷೇತ್ರದ ಮಾಜಿ ಶಾಸಕ ದಿನಕರ್ ಶೆಟ್ಟಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸನ್ಮಾನಿಸಿ ಪಕ್ಷಕ್ಕೆ ಬರಮಾಡಿಕೊಂಡರು.
ಕಳೆದ 2008ರಲ್ಲಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ದಿನಕರ್ ಶೆಟ್ಟಿ, ನಂತರದ ಚುನಾವಣೆಗಳಲ್ಲಿ ಸೋಲು ಅನುಭವಿಸಿದ್ದರು. ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಹೊಸ ರಾಜಕೀಯ ಜೀವನ ಆರಂಭಿಸುತ್ತಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಬಹುತೇಕ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.