ದೇವನಹಳ್ಳಿ ಕ್ಷೇತ್ರದ ಶಾಸಕ ಪಿಳ್ಳಮುನಿಶಾಮಪ್ಪ ರಾಜೀನಾಮೆ ನೀಡಿರುವುದು ನಿಜ. ನಿಯಮಾವಳಿಗಳ ಪ್ರಕಾರ ಕ್ರಮಕೈಗೊಳ್ಳುತ್ತೇನೆ ಎಂದು ಸ್ಪೀಕರ್ ಕೋಳಿವಾಡ್ ತಿಳಿಸಿದ್ದಾರೆ.
ಪಿಳ್ಳಮುನಿಶಾಮಪ್ಪ ಇಂದು ಕಚೇರಿಗೆ ಬಂದು ರಾಜೀನಾಮೆ ಸಲ್ಲಿಸಿದ್ದಾರೆ ವ್ಯಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಿಸರ್ಗ ನಾರಾಯಣಪ್ಪರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ, ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಪಿಳ್ಳ ಮುನಿಶಾಮಪ್ಪ ಅವರೊಂದಿಗೆ ಚರ್ಚೆ ನಡೆಸುತ್ತಿದ್ದು ಸಮಸ್ಯೆ ಇತ್ಯರ್ಥವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.