ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಆಸಕ್ತಿ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರ ತಲೆಯಲ್ಲಿ ಏನಿದೆ ಗೊತ್ತಿಲ್ಲ. ಈಗಾಗಲೇ ಅವರು ಕಾಂಗ್ರೆಸ್ ಪಕ್ಷ ತೊರೆದಿರುವುದಕ್ಕೆ ಸ್ಪಷ್ಟ ಕಾರಣ ನೀಡಿದ್ದಾರೆ. ಅವರು ಹಿರಿಯ ನಾಯಕರಾಗಿರುವುದರಿಂದ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಕೃಷ್ಣ ಅವರಿಗೆ ಜೆಡಿಎಸ್ ಪಕ್ಷ ಸೇರಲು ಆಹ್ವಾನ ನೀಡಿತ್ತೀರಾ? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಯಾವುದೇ ವಿಚಾರ ಬಂದಿಲ್ಲ, ಮತ್ತು ಪಕ್ಷ ಸೇರುವಂತೆ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹದಾಯಿ ವಿವಾದ ಬಗೆಹರಿಸಲು ನಮ್ಮ ಪಕ್ಷ ಎಲ್ಲಾ ರೀತಿಯ ಪ್ರಯತ್ನ ಮಾಡಿದೆ. ಸಂದರ್ಭ ಬಂದರೆ ಪ್ರಧಾನಿ ನರೇಂದ್ರ ಮೋದಿ ಕಚೇರಿ ಮುಂದೆ ಧರಣಿ ಮಾಡಲು ಸಹ ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ