ಮುಂದಿನ ವರ್ಷ 2018ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಜೆಡಿಎಸ್ ಪಕ್ಷ ಅಖಾಡಾ ಸಿದ್ದಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರವಧಿ ಪೂರ್ಣಗೊಳಿಸಿದ ನಂತರ ಚುನಾವಣೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದರಂತೆ ಮುಂದಿನ ವರ್ಷದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಗಾಗಿ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಸೂಕ್ತವಾದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಣಕ್ಕಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲ.ಸ್ಪರ್ಧಿಸಿದ್ದರೆ ಕಾಂಗ್ರೆಸ್ ಸೋಲನುಭವಿಸುತ್ತಿತ್ತು. ಅಲ್ಪಸಂಖ್ಯಾತರಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ಸ್ಪರ್ಧಿಸಿರಲಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.