Publish Date: Sat, 29 Feb 2020 (11:28 IST)
Updated Date: Sat, 29 Feb 2020 (11:31 IST)
ಬೆಂಗಳೂರು : ಸಚಿವ ನಾರಾಯಣಗೌಡ ಅವರ ವಿರುದ್ಧ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ನಾರಾಯಣ ಗೌಡ ಅವರು ಕಿರುಕುಳ ನೀಡುತ್ತಿದ್ದಾರೆ ಎಂದ ಆರೋಪಿಸಿ ಇಂದು ಜೆಡಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಹರಳವಳ್ಳಿ ಬಳಿ ಪ್ರತಿಭಟನೆ ನಡೆಸೋದಕ್ಕೆ ಜೆಡಿಎಸ್ ನಾಯಕರು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇದರಲ್ಲಿ ಹಲವು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.