ಜೆಡಿಎಸ್ ಪಕ್ಷದಿಂದ ಉಚ್ಛಾಟನೆಗೊಂಡಿರುವ ಏಳು ಶಾಸಕರು ಕಾಂಗ್ರೆಸ್ ಪಕ್ಷ ಸೇರುವುದು ಖಚಿತ ಎಂದು ಬಂಡಾಯ ಶಾಸಕ ಬಾಲಕೃಷ್ಣ ಖಚಿತಪಡಿಸಿದ್ದಾರೆ.
ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 30 ವರ್ಷಗಳಿಂದ ಕಾಂಗ್ರೆಸ್ ಪಕ್ಷ ವಿರೋಧಿಸುತ್ತಾ ಬಂದಿದ್ದೇನೆ. ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದರಿಂದ ಕಾಂಗ್ರೆಸ್ಸಿಗರು ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿ ಎಂದರು.
ನಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರೆ ಕಾಂಗ್ರೆಸ್ ಸದಸ್ಯರು ವಿರೋಧಿಸುವುದು ಸಹಜ. ಕೆಲವು ಕಾಂಗ್ರೆಸ್ ಸದಸ್ಯರು ಪಕ್ಷ ತೊರೆದು ಜೆಡಿಎಸ್ ಪಕ್ಷ ಹೋಗ್ತಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಕ್ಕೆ ಕಾಂಗ್ರೆಸ್ ನಾಯಕರು 80 ಪ್ರತಿಶತ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಮುಂಬರುವ ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ನೀಡದಿದ್ದರೆ, ನಾವು ಮುಂದಿನ ದಾರಿ ಹುಡುಕುವುದು ಅನಿವಾರ್ಯ ಎಂದು ಜೆಡಿಎಸ್ ಉಚ್ಛಾಟಿತ ಶಾಸಕ ಬಾಲಕೃಷ್ಣ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ