Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್: ಸಿಎಂ ಭರವಸೆ

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್: ಸಿಎಂ ಭರವಸೆ
ಬೆಂಗಳೂರು , ಶುಕ್ರವಾರ, 3 ಮಾರ್ಚ್ 2017 (20:47 IST)
ಜೆಡಿಎಸ್ ಪಕ್ಷದ ಬಂಡಾಯ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಂಡಾಯ ಶಾಸಕರು ಸಿಎಂ ಸಿದ್ದರಾಮಯ್ಯರೊಂದಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಖಚಿತತೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಟಿಕೆಟ್ ನೀಡುವುದು ಖಚಿತವಾದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಬಂಡಾಯ ಶಾಸಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
 
ಸಿಎಂ ಸಿದ್ದರಾಮಯ್ಯ ನಮ್ಮ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡುವ ಭರವಸೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇವೆ. ಬಿಜೆಪಿಗೆ ಸೇರ್ಪಡೆಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರೆಬೆಲ್ ಶಾಸಕ ಎಚ್.ಸಿ ಬಾಲಕೃಷ್ಣ ತಿಳಿಸಿದ್ದಾರೆ.
 
ಯುಗಾದಿ ಹಬ್ಬದ ನಂತರ ಕ್ಷೇತ್ರದ ಜನತೆಯ ಸಭೆ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕುರಿತಂತೆ ಘೋಷಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
 
ಜೆಡಿಎಸ್ ಬಂಡಾಯ ಶಾಸಕರಾದ ಜಮೀರ್ ಅಹ್ಮದ್ ಖಾನ್, ಚೆಲುವರಾಯ ಸ್ವಾಮಿ,ಎಚ್.ಸಿ. ಬಾಲಕೃಷ್ಣ, ಭೀಮಾನಾಯ್ಕ ಉಪಸ್ಥಿತರಿದ್ದರೆಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪಘಾತದಲ್ಲಿ ಕಾಲು ಕಳೆದುಕೊಂಡು ಒದ್ದಾಡುತ್ತಿದ್ದರೂ ರಕ್ಷಣೆಗೆ ಬಾರದೆ ವಿಡಿಯೋ ಮಾಡುತ್ತಿದ್ದ ಜನ