ಮಾಜಿ ಸಚಿವ ಆನಂದ್ ಆಸ್ನೋಟಿಕರ್ಗೆ ಜೆಡಿಎಸ್ ಗಾಳ ಹಾಕಲು ಚಿಂತನೆ ನಡೆಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಆನಂದ್ ಆಸ್ನೋಟಿಕರ್ಗೆ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಆಹ್ವಾನ ನೀಡಲಾಗಿದೆ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಹೆಚ್ಚಿನ ಸೀಟುಗಳಲ್ಲಿ ಜಯಗಳಿಸಿ ಅಧಿಕಾರದ ಗದ್ದುಗೆ ಹಿಡಿಯಬೇಕು ಎನ್ನುವುದು ಜೆಡಿಎಸ್ ತಂತ್ರವಾಗಿದೆ.
ರಾಜ್ಯದ 224 ಕ್ಷೇತ್ರಗಳಲ್ಲೂ ವಿಪಕ್ಷಗಳಿಗೆ ಪ್ರಬಲ ಸ್ಪರ್ಧೆ ನೀಡಬೇಕು ಎನ್ನುವುದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಿಲುವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.