ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ರಮೇಶ್ಬಾಬು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಗಳಲ್ಲೂ ಬೂತ್ ಮಟ್ಟದ ಸಮಿತಿ ರಚಿಸಲಾಗುವುದು. ಒಂದು ವೇಳೆ, ಅವಧಿಪೂರ್ವ ಚುನಾವಣೆ ಎದುರಾದಲ್ಲಿ ಅದಕ್ಕೂ ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ 20 ತಿಂಗಳ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಮತ್ತು ಪಕ್ಷದ ವರಿಷ್ಠ ದೇವೇಗೌಡರು ಪ್ರಧಾನಿಯಾಗಿದ್ದಾಗ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮುಟ್ಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಜೆಡಿಎಸ್ ಮುಖಂಡ ರಮೇಶ್ಬಾಬು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.