Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಳಗಾವಿ : ಪತ್ನಿಗೆ ಸೀರೆ ಖರೀದಿಸಿ ಸುದ್ದಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗ ಆಟಿಕೆಗಳನ್ನು ಖರೀದಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
ಯಾವುದೇ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮಕ್ಕೆ ತೆರಳಿದರೂ ಇಷ್ಟದ ವಸ್ತುಗಳನ್ನು ಖರೀದಿಸುವುದು ಎಂದರೆ ಸಿಎಂ ಬೊಮ್ಮಾಯಿ ಅವರಿಗೆ ಇನ್ನಿಲ್ಲದ ಆಸಕ್ತಿ. ಹೀಗಾಗಿ ಅವರು ವಸ್ತುಗಳನ್ನು ಖರೀದಿಸುವ ಮೂಲಕ ಆಗಾಗ ಸುದ್ದಿಯಾಗುತ್ತಿರುತ್ತಾರೆ.
ರಾಟ ಮೇಳದಲ್ಲಿ ಚನ್ನಪಟ್ಟಣದ ಪ್ರಸಿದ್ಧ ಆಟಿಕೆ ವಸ್ತುಗಳು ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆದವು. ಈ ವೇಳೆ ಎರಡು ಆಟಿಕೆ ಜೀಪ್ಗಳನ್ನು ಖರೀದಿಸಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಅಶ್ವತ್ ನಾರಾಯಣ್ ಹಾಗೂ ಇತರರು ಉಪಸ್ಥಿತರಿದ್ದರು.