Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಾವೇರಿ ಕಿಚ್ಚು ಆರಿದ ನಂತರ ಕೆ.ಜೆ. ಜಾರ್ಜ್ ಸಂಪುಟಕ್ಕೆ ಮರುಸೇರ್ಪಡೆ

ಕಾವೇರಿ ಕಿಚ್ಚು ಆರಿದ ನಂತರ ಕೆ.ಜೆ. ಜಾರ್ಜ್ ಸಂಪುಟಕ್ಕೆ ಮರುಸೇರ್ಪಡೆ
ಬೆಂಗಳೂರು , ಗುರುವಾರ, 22 ಸೆಪ್ಟಂಬರ್ 2016 (19:27 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ನಂತರ ಕ್ಲೀನ್ ಚಿಟ್ ಪಡೆದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
 
ರಾಜ್ಯಾದ್ಯಂತ ಕಾವೇರಿ ವಿಷಯ ಬೃಹದಾಕಾರವಾಗಿ ಎದುರಾಗಿರುವ ಹಿನ್ನೆಲೆಯಲ್ಲಿ, ಕಾವೇರಿ ಕಿಚ್ಚು ಆರಿದ ನಂತರ ಜಾರ್ಜ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
 
ಡಿವೈಎಸ್‌ಪಿ ಗಣಪತಿ ಮಾಜಿ ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಸಾದ್, ಮೊಹಾಂತಿ ಕಿರುಕುಳ ನೀಡಿದ್ದು, ನನ್ನ ಆತ್ಮಹತ್ಯೆಗೆ ಅವರೇ ಕಾರಣವಾಗಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಘಟನೆಯ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿತ್ತು. ಸಿಐಡಿ ಅಧಿಕಾರಿಗಳು ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದ ಹಿನ್ನೆಲೆಯಲ್ಲಿ ಇದೀಗ ಮತ್ತೆ ಸಚಿವ ಸ್ಥಾನ ಜಾರ್ಜ್‌ಗೆ ಒಲಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂಕೋರ್ಟ್ ಆದೇಶ ಪಾಲಿಸಿ: ಬಿಜೆಪಿ ವಕ್ತಾರೆ