ರಾಯಣ್ಣ ಬ್ರಿಗೇಡ್‌ನ ಮುಂದಿನ ನಡೆ ಕುರಿತು ಚರ್ಚೆ ನಡೆಸಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದಿದ್ದಾರೆ.
ತೂಮಕೂರಿನ ಹೊರವಲಯದ ಊರುಕೇರೆಯಲ್ಲಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರ ನಿವಾಸದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕೆ.ಎಸ್.ಈಶ್ವರಪ್ಪ ಸೇರಿದಂತೆ 80 ಹೆಚ್ಚು ನಾಯಕರು ಭಾಗಿಯಾಗಿದ್ದಾರೆ.
ಈ ಮಹತ್ವದ ಸಭೆಯಲ್ಲಿ ಬಿಜೆಪಿಯ ಅತೃಪ್ತ ನಾಯಕರು ಭಾಗಿಯಾಗಿದ್ದು, ನಾಳೆ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಸಭೆಗೆ ಚಕ್ಕರ ಹೊಡೆಯುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ.
ಬಿ.ಎಸ್.ಯಡಿಯೂರಪ್ಪ ಹೊರಡಿಸಿರುವ ಆದೇಶವನ್ನು ಧಿಕ್ಕರಿಸಿ ಬಿಜೆಪಿ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಪಕ್ಷ ಇವರ ವಿರುದ್ಧ ಯಾವ ಕ್ರಮವನ್ನು ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ