Webdunia - Bharat's app for daily news and videos

Install App

PSI ಹಗರಣದಲ್ಲಿ ‘ಕೈ’ MLA ಪುತ್ರ, ಸೋದರ?

Webdunia
ಸೋಮವಾರ, 11 ಜುಲೈ 2022 (21:16 IST)
ಪಿಎಸ್​ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಆಳಕ್ಕೆ ಹೋದಷ್ಟೂ ಹಲವು ಗಣ್ಯರ ಹೆಸರು ಹೊರಕ್ಕೆ ಬರುತ್ತಿದೆ. ಕೆಲ ದಿನಗಳ ಹಿಂದಷ್ಟೇ ಎಡಿಜಿಪಿ ಅಮೃತ್ ಪೌಲ್ ಅವರು ಈ ಕೇಸ್​ನಲ್ಲಿ ಸಿಲುಕಿಕೊಂಡಿದ್ದರು. ಇದೀಗ ಕಾಂಗ್ರೆಸ್​ ಶಾಸಕರೊಬ್ಬರ ಮಗ ಹಾಗೂ ಅವರ ಸಹೋದರ ಕೂಡ ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಅಫಜಲಪುರದ ಕಾಂಗ್ರೆಸ್​ ಶಾಸಕ ಎಂ.ವೈ.ಪಾಟೀಲ್ ಪುತ್ರ ಅರುಣ್ ಪಾಟೀಲ್ ಹಾಗೂ ಶಾಸಕರ ಸಹೋದರ ಎಸ್.ವೈ.ಪಾಟೀಲ್​ಗೆ ಸಂಕಷ್ಟ ಎದುರಾಗಿದೆ. ಶಾಸಕ ಎಂ.ವೈ.ಪಾಟೀಲ್ ಅವರ ಗನ್​ಮ್ಯಾನ್​ ಹಯ್ಯಾಳಿ ದೇಸಾಯಿ ಅವರನ್ನು ಪಿಎಸ್​ಐ ಮಾಡುವ ಉದ್ದೇಶದಿಂದ ಅಕ್ರಮ ನಡೆದಿರುವ ಶಂಕೆ ಉಂಟಾಗಿದೆ. ಹಯ್ಯಾಳಿ ದೇಸಾಯಿ ಅವರನ್ನು ಪಿಎಸ್‌ಐ ಮಾಡಬೇಕು ಎಂದು ಅರುಣ್​ ಅವರು, ಮಂಜುನಾಥ್‌ ಮೇಳಕುಂದಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ಮಾತನಾಡಲು ಮಂಜುನಾಥ್‌ ಮೇಳಕುಂದಿಗೆ ಕರೆಮಾಡಿದ್ದ ಆರ್​.ಡಿ.ಪಾಟೀಲ್​ ಅವರು, ಅರುಣ್ ಜತೆ ಮಾತನಾಡುವಂತೆ ಸೂಚಿಸಿರುವುದಾಗಿ ತಿಳಿದು ಬಂದಿದೆ. ಈ ಸೂಚನೆ ಮೇರೆಗೆ ಮಂಜುನಾಥ್‌ ಮೇಳಕುಂದಿ ಶಾಸಕರ ಪುತ್ರ ಅರುಣ್ ಕುಮಾರ್​ಗೆ ಕರೆ ಮಾಡಿ 30 ಲಕ್ಷಕ್ಕೆ ಡೀಲ್ ಕುದುರಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments