ಅಭಿಮಾನಿಗಳ ಒತ್ತಾಯದ ಮೇರೆಗೆ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದು ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಸ್ಪಷ್ಟಪಡಿಸಿದ್ದಾರೆ.
ನಂಜನಗೂಡಿನ ಯಾತ್ರಿ ಭವನದಲ್ಲಿ ಬೆಂಬಲಿಗರು ಹಾಗೂ ಹಿತೈಷಿಗಳ ಸಭೆ ಕರೆದು ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಅಭಿಪ್ರಾಯಪಡಿದ ಕೇಶವಮೂರ್ತಿ ಅವರಿಗೆ ಅಲ್ಲಿ ಸೇರಿದ್ದ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರಬೇಕೆಂದು ಒಟ್ಟಾಗಿ ಕೈ ಎತ್ತಿ ಬೆಂಬಲ ಸೂಚಿಸಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಬಲಿಗರ ಒತ್ತಾಯದ ಮೇಲೆ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದೇನೆ ಎಂದರು.
ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಅವರು ಇಂದು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.