ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿವೃದ್ಧಿ ಪರ ಕಾರ್ಯಗಳು, ಜನಪರ ಯೋಜನೆಗಳು ನನ್ನ ಗೆಲುವಿಗೆ ಕಾರಣವಾಗಿವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಹೇಳಿದ್ದಾರೆ.
ನಂಜನಗೂಡು ಚುನಾವಣೆ ಫಲಿತಾಂಶದಿಂದ ಸಂತಸಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್ ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದು ಭರವಸೆ ನೀಡಿದರು.
ನಂಜನಗೂಡು ಕ್ಷೇತ್ರದ ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಕ್ಕಾಗಿ ಸಂತಸವಾಗಿದೆ. ಮತದಾರರ ನಿರೀಕ್ಷೆಯಂತೆ ಕ್ಷೇತ್ರದ ಏಳಿಗೆಗಾಗಿ ದುಡಿಯುತ್ತೇನೆ ಎಂದರು.
ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಹಾಕದೆ ಸಹಕರಿಸಿದ್ದರಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರಿಗೂ ಅಭಿನಂದನೆ ಸಲ್ಲಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.