ಗ್ರಾಮೀಣ ಕ್ರೀಡೆಗಳಾದ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ರಾಜ್ಯಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪ್ರಾಣಿ ಮೇಲಿನ ಹಿಂಸೆ ತಡೆ ಕಾಯ್ದೆ ಅಂಗೀಕರಿಸಿದ್ದು, ಇದರಲ್ಲಿ ಈ ಎರಡೂ ಕ್ರೀಡೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ವಿಧಾನಸಭೆಯಲ್ಲಿ ಪಶುಸಂಗೋಪನಾ ಸಚಿವ ಎ. ಮಂಜು ಪ್ರಾಣಿ ಹಿಂಸೆ ತಿದ್ದುಪಡಿ ಕಾಯ್ದೆಯನ್ನ ಮಂಡಿಸಿದ್ದು, ಎಲ್ಲ ಪಕ್ಷಗಳ ಸದಸ್ಯರು ಪಕ್ಷಾತೀತವಾಗಿ ಈ ವಿಧೇಯಕಕ್ಕೆ ಬೆಂಬಲ ನೀಡಿದ್ದಾರೆ.