Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಂಬಳ ಕ್ರೀಡೆ ಆಚರಣೆಗೆ ಸ್ಪಂದಿಸದಿದ್ರೆ ಕರ್ನಾಟಕ ಬಂದ್: ವಾಟಾಳ್ ವಾರ್ನಿಂಗ್

ಕಂಬಳ ಕ್ರೀಡೆ ಆಚರಣೆಗೆ ಸ್ಪಂದಿಸದಿದ್ರೆ ಕರ್ನಾಟಕ ಬಂದ್: ವಾಟಾಳ್ ವಾರ್ನಿಂಗ್
ಬೆಂಗಳೂರು , ಮಂಗಳವಾರ, 24 ಜನವರಿ 2017 (15:53 IST)
ಕಂಬಳ ಕ್ರೀಡೆಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸ್ಪಂದಿಸದಿದ್ದರೇ ಫೆಬ್ರುವರಿ 18 ರಂದು ಕರ್ನಾಟಕ ಬಂದ್‌ಗೆ ಕರೆ ನೀಡುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
 
ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಬಾಬು ಜಗಜೀವನ್ ರಾಮ್ ವೃತ್ತದಲ್ಲಿ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಆಚರಣೆಗೆ ಅನುಮತಿ ನೀಡಿರುವಂತೆ ರಾಜ್ಯದಲ್ಲಿ ಕಂಬಳ ಆಚರಣೆಗೆ ಅನುಮತಿ ನೀಡಲು ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು. 
 
ರಾಜ್ಯದ ಜನಪದ ಕ್ರೀಡೆಯಾಗಿರುವ ಕಂಬಳವನ್ನು ರಾಜ್ಯ ಹಾಗೂ ಕೇಂದ್ರ ಸರಕಾರ ನಿರ್ಲಕ್ಷ್ಯ ಮಾಡಿವೆ. ಕಂಬಳಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿ ನಾಳೆ ರಾಜಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುತ್ತೆದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಕಂಬಳಕ್ಕೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು, ಅಗತ್ಯ ಬಿದ್ದರೆ ಕಂಬಳ ಆಚರಣೆಗೆ ಸುಗ್ರೀವಾಜ್ಞೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೋಟು ನಿಷೇಧ, ನಗದುರಹಿತ ಆರ್ಥಿಕತೆಯನ್ನು ಪಠ್ಯದಲ್ಲಿ ಅಳವಡಿಕೆ: ರಾಜಸ್ಥಾನ್ ಸರಕಾರ