ಗುಂಡ್ಲುಪೇಟೆ ಕ್ಷೇತ್ರಕ್ಕೆ ಕನಕಪುರ ಗೂಂಡಾಗಳ ಆಗಮಿಸಿದ್ದು ಮಹಿಳೆಯರು ಹೆದರಿ ಮನೆಗಳಿಂದ ಹೊರಗೆ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.
ಉಪಚುನಾವಣೆ ಪ್ರಚಾರದಲ್ಲಿ ಆರೋಪ, ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಪರಸ್ಪರ ವಾಗ್ದಾಳಿಯಲ್ಲಿ ತೊಡಗಿದ್ದಾರೆ
ಗೋವಿಂದರಾಜು ಡೈರಿಯಲ್ಲಿ ಉಲ್ಲೇಖವಾದ ಸಚಿವ ಯು.ಟಿ. ಖಾದರ್. ಎಂ.ಬಿ.ಪಾಟೀಲ್,ಡಿ.ಕೆ.ಶಿವಕುಮಾರ್, ಇಲ್ಲಿಯೇ ಠಿಕಾಣಿ ಹೂಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಸ್ತ್ರೀಶಕ್ತಿ ಸಹಾಯ ಸಂಘಗಳಿಗೆ ಹಣ ಹಂಚಲಾಗುತ್ತಿದೆ. ಕ್ಷೇತ್ರದಲ್ಲಿ ಬೀಡು ಬಿಟ್ಟಿರುವ ಪ್ರಭಾವಿ ಮುಖಂಡರನ್ನು ಹೊರಹಾಕಬೇಕು ಎಂದು ಗುಡುಗಿದ್ದಾರೆ.
ಕಾಂಗ್ರೆಸ್ ಸೋಲಿನ ಹತಾಷೆಯಿಂದಾಗಿ ವಾಮಮಾರ್ಗ ಅನುಸರಿಸುತ್ತಿದೆ. ಬಿಜೆಪಿ ಹೆಣ್ಣುಮಕ್ಕಳು ವಾಸವಾಗಿರುವ ಮನೆಗಳನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಚುನಾವಣೆ ಪಾರದರ್ಶಖವಾಗಿ ನಡೆಯಲು ಕೇಂದ್ರ ಚುನಾವಣೆ ಆಯೋಗ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.