Publish Date: Mon, 10 Apr 2023 (19:10 IST)
Updated Date: Mon, 10 Apr 2023 (18:45 IST)
KPCC ಅಧ್ಯಕ್ಷ D.K. ಶಿವಕುಮಾರ್ ಭದ್ರಕೋಟೆಯಾಗಿರುವ ರಾಮನಗರದ ಕನಕಪುರಕ್ಕೆ JDS ಟಿಕೆಟ್ ಬಹುತೇಕ ಫೈನಲ್ ಆಗಿದೆ. ತಾಲ್ಲೂಕು ಅಧ್ಯಕ್ಷ ಹಾಗೂ ಮಾಜಿ ಪುರಸಭಾ ಅಧ್ಯಕ್ಷ ಬಿ.ನಾಗರಾಜುಗೆ JDS ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಪಕ್ಷದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂಬ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ.. ಕಳೆದ ಹಲವು ವರ್ಷಗಳಿಂದ B. ನಾಗರಾಜ್ ಕನಕಪುರದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ.. ಮಾಜಿ ಸಿಎಂ H.D ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ. JDS ಮುಖಂಡರು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ನಮ್ಮ ಅಭ್ಯರ್ಥಿಗೆ ಮತ ನೀಡಿ ಎಂದು ಕ್ಯಾಂಪೇನ್ ಆರಂಭಿಸಿದ್ದಾರೆ.. ಕನಕಪುರದಲ್ಲಿ ಜೆಡಿಎಸ್ ಪಕ್ಷಕ್ಕೆ 60 ಸಾವಿರಕ್ಕೂ ಹೆಚ್ಚು ಮತಗಳಿವೆ.. ಗೆಲ್ಲಲಾಗದಿದ್ದರೂ ಡಿಕೆಶಿ ಗೆಲುವಿನ ಅಂತರ ಕಡಿಮೆ ಮಾಡೋಕೆ JDS ಪ್ಲ್ಯಾನ್ ಮಾಡಿದೆ.