ಬೆಂಗಳೂರು: ಮುಂದಿನ ತಿಂಗಳು 6 ರಿಂದ ಮೂರು ದಿನಗಳವರೆಗೆ ವಿಧಾನಸೌಧದಲ್ಲಿ ವಿಶೇಷ ಜಂಟಿ ಅಧಿವೇಶನ ನಡೆಯಲಿದೆ. ಮೊದಲ ದಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.
ಸ್ಪೀಕರ್ ಗಳು ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಕಾನೂನು ಸಚಿವರಿಗೆ ಸೂಚನೆ ನೀಡಲಾಗಿದೆ ಮೂಲಗಳಿಂದ ತಿಳಿದುಬಂದಿದೆ. ರಾಷ್ಟ್ರಪತಿಯಾದ ಮೇಲೆ ಇದೇ ಮೊದಲ ಬಾರಿಗೆ ರಾಮನಾಥ್ ಕೋವಿಂದ್ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಲ್ಲದೆ, ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಭಾಷಣ ಮಾಡುವ ಮೊದಲೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡುತ್ತಿರುವುದು ವಿಶೇಷವಾಗಿದೆ.
ಹಲವು ವಿಧೇಯಕಗಳಿಗೆ ಸದನದ ಒಪ್ಪಿಗೆ ಪಡೆಯಬೇಕಿರುವುದರಿಂದ ಮೂರು ದಿನಗಳ ಈ ತುರ್ತು ಅಧಿವೇಶನ ಮಹತ್ವದ್ದಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ