ಬೆಂಗಳೂರು:ಕಳಸಾಬಂಡೂರು ಹಾಗೂ ಮಹದಾಯಿ ಯೋಜನೆ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈದೇರಿಕೆಗೆ ಆಗ್ರಹಿಸಿ ಜೂನ್ 12ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದೆ ಎಂದು ಕನ್ನಡ ವಾಟಾಳ್ ಪಕ್ಷದ ಮುಖ್ಯಸ್ಥ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣದ ವಿರುದ್ಧ, ರೈತರ ಸಾಲ ಮನ್ನಾ ಹಾಗೂ ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಜಾರಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಲು ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ರೈತರು ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಶಾಶ್ವತ ಪರಿಹಾರ ಕೊಂಡುಕೊಳ್ಳುವಲ್ಲಿ ವಿಫಲವಾಗಿದೆ. ಗೋವಾ, ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ಜೂನ್ 12ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ಜರುಗಲಿದೆ. ಕರ್ನಾಟಕ ಬಂದ್ ಗೆ ವಿವಿಧ ಸುಮಾರು 2000 ಸಂಘಟನೆಗಳು ಕೈಜೋಡಿಸಲಿವೆ. ಅಂದು ಉದ್ದಿಮೆಗಳು, ಚಿತ್ರರಂಗ ಸೇರಿದಂತೆ ಪ್ರತಿಯೊಬ್ಬರೂ ಬಂದ್ ಗೆ ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.