Webdunia - Bharat's app for daily news and videos

Install App

ಕೊತ್ವಾಲ್ ಬ್ರದರ್ಸ್ ಬೆದರಿಕೆ ಶುರು: ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆರೋಪ

Krishnaveni K
ಬುಧವಾರ, 17 ಏಪ್ರಿಲ್ 2024 (11:50 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿಕೆ ಸುರೇಶ್ ಗೆಲ್ಲಿಸಲು ಡಿಕೆ ಶಿವಕುಮಾರ್, ಕೊತ್ವಾಲ್ ಬ್ರದರ್ಸ್ ನಂತೆ ಬೆದರಿಸುವ ಮಟ್ಟಕ್ಕಿಳಿದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಬಗ್ಗೆ ಎಕ್ಸ್ ಮಾಡಿರುವ ರಾಜ್ಯ ಬಿಜೆಪಿ, ಅಪಾರ್ಟ್ ಮೆಂಟ್ ನಿವಾಸಿಗಳೊಂದಿಗೆ ಡಿಕೆ ಶಿವಕುಮಾರ್ ಸಭೆಯಲ್ಲಿ ನೀವು ನನಗೆ ವೋಟ್ ಮಾಡಿದರೆ ನೀರು ಕೊಡುತ್ತೇನೆ, ಹಕ್ಕುಪತ್ರ ಕೊಡುತ್ತೇನೆ ಎಂಬಿತ್ಯಾದಿ ಭರವಸೆ ನೀಡುತ್ತಿರುವ ದೃಶ್ಯವನ್ನು ಪ್ರಕಟಿಸಿದ್ದು, ಡಿಕೆ ಸಹೋದರರು ಇಲ್ಲಿನ ನಿವಾಸಿಗಳನ್ನು ಬೆದರಿಸುವ ಮಟ್ಟಕ್ಕಿಳಿದಿದ್ದಾರೆ ಎಂದಿದೆ.

ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ರೈತನೊಬ್ಬ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಅವರನ್ನು ಬೆಂಬಲಿಸಿದ್ದಕ್ಕೆ ಡಿಕೆ ಸುರೇಶ್ ಬೆಂಬಲಿಗರು ಆತನ ಹೊಲವನ್ನೇ ಸುಟ್ಟುಹಾಕಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಇದನ್ನು ಪ್ರಸ್ತಾಪಿಸಿರುವ ಬಿಜೆಪಿ ಘಟಕ ನಿನ್ನೆ ರೈತನ ಹೊಲ ಸುಟ್ಟು ರೈತನಿಗೆ ಗನ್ ಪಾಯಿಂಟ್ ಇಟ್ಟು ವಾತಾವರಣವನ್ನು ಭಯಭೀತಗೊಳಿಸಿದ್ದರು. ಇಂದು ಅಪಾರ್ಟ್ ಮೆಂಟ್ ನಿವಾಸಿಗಳ ಜೊತೆ ಸಭೆ ನಡೆಸಿ ನೀವು ಡಿಕೆ ಸುರೇಶ್ ಗೆ ವೋಟ್ ಕೊಡದೇ ಇದ್ದರೆ ನಿಮಗೆ ನೀರು ಕೊಡುವುದಿಲ್ಲ, ಹಕ್ಕು ಪತ್ರ ಕೊಡುವುದಿಲ್ಲ ಎಂದು ನೇರವಾಗಿಯೇ ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ನಿಮ್ಮ ಈ ಗೊಡ್ಡು ಬೆದರಿಕೆಗಳಿಗೆ ಜನತೆ ಏಪ್ರಿಲ್ 26 ರಂದು ಅಂತಿಮ ಮೊಳೆ ಹೊಡೆಯುವುದು ನಿಶ್ಚಿತ ಎಂದು ವಾಗ್ದಾಳಿ ನಡೆಸಿದೆ.

ತೋಟವನ್ನು ಸುಟ್ಟವರು ನಾವು,ನಿನ್ನನ್ನೂ ಸುಟ್ಟು ಹಾಕವುದು ಕಷ್ಟವೇ ರೈತನಿಗೆ ಬೆದರಿಕೆ ಹಾಕಿದ್ದಾರೆ ಬಿಜೆಪಿ ಆರೋಪಿಸಿದೆ. ರೈತ ಪ್ರೇಮಕುಮಾರ್ ಎಂಬಾತನ ತೋಟದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.  ಅಧಿಕಾರವಿದೆ ಎಂದು ಯಾವ ಮಟ್ಟಕ್ಕೆ ಬೇಕಾದರೂ ಇಳಿಯಬೇಡಿ ಎಂದು ಬಿಜೆಪಿ ಕಿಡಿ ಕಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments