Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದರ್ಶನ್ ಅರೆಸ್ಟ್ ಮಾಡಿದ ಪೊಲೀಸ್ ಠಾಣೆಗೆ ಶಾಮಿಯಾನ: ಬಿಜೆಪಿ ಆಕ್ರೋಶ

Darshan police station

Krishnaveni K

ಬೆಂಗಳೂರು , ಗುರುವಾರ, 13 ಜೂನ್ 2024 (15:22 IST)
Photo Credit: X
ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ. ಅಮಾಯಕರ ಕೊಲೆಗಳು ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು.
 
ಕಾನೂನು ಎಲ್ಲರಿಗೂ ಸಮಾನ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವುದೇ ಕಾನೂನು. ನಮ್ಮ ಸಂವಿಧಾನದಂತೆ ಕಾನೂನಿನಡಿ ಎಲ್ಲರೂ ಸಮಾನರು. ಆದರೆ, ವಿಐಪಿಯನ್ನು ಕರೆದುಕೊಂಡು ಬಂದ ತಕ್ಷಣ ಶಾಮಿಯಾನ ಹಾಕಿ, ಮಾಧ್ಯಮದವರ ಮೇಲೆ ಹಲ್ಲೆ ಮಾಡಿ, ಮಾಧ್ಯಮದವರನ್ನು ಪೊಲೀಸ್ ಠಾಣೆ ಆವರಣಕ್ಕೆ ಬಿಡಲಾರದಂತೆ ವರ್ತಿಸುತ್ತಿದ್ದು, ಇದು ಸರಕಾರ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ವಿವರಿಸಿದರು.

ಪ್ರತಿಯೊಬ್ಬರ ಮಾನ- ಪ್ರಾಣಕ್ಕೆ ಬಹಳ ದೊಡ್ಡ ಘನತೆ ಇದೆ. ಅಮಾಯಕರ ಪ್ರಾಣಹಾನಿಗೆ ಕಾರಣ ಆದವರ ವಿರುದ್ಧ ಕಾನೂನಿನಡಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ಇನ್ನು ಮುಂದೆ ಅಮಾಯಕರ ಪ್ರಾಣಹಾನಿ ಆಗದಂತೆ ಗೃಹ ಸಚಿವರು ಮತ್ತು ಪೊಲೀಸ್ ಇಲಾಖೆ ತನ್ನ ಕರ್ತವ್ಯ ನಿರ್ವಹಿಸಲಿ ಎಂದು ಒತ್ತಾಯಿಸಿದರು.

ವೈಯಕ್ತಿಕ ಹಿತಾಸಕ್ತಿ, ಓಲೈಕೆಗೆ ಸೆಕ್ಷನ್ ಬಳಕೆ..
ಪೊಲೀಸ್ ಠಾಣೆಗೆ 144 ಸೆಕ್ಷನ್ ಹಾಕುವುದು ಎಂದರೆ ಪೊಲೀಸ್ ಸ್ಟೇಶನನ್ನು ರಕ್ಷಿಸಲು ಇನ್ನೊಬ್ಬ ಖಾಸಗಿಯವರಿಗೆ ಕೊಟ್ಟಂತೆ. ಅಂದರೆ, ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ನಿದರ್ಶನವಿದು ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು. ಮಾಧ್ಯಮದವರನ್ನು ದೂರ ಇಡುವ ಉದ್ದೇಶ, ಇನ್ನೊಬ್ಬರನ್ನು ದೂರವಿಡಲು ಮತ್ತು ಠಾಣೆಯಲ್ಲಿ ತಮ್ಮ ವೈಯಕ್ತಿಕ ಹಿತಾಸಕ್ತಿಯ ಚಟುವಟಿಕೆ ಮಾಡುವುದಕ್ಕಾಗಿ ಅಥವಾ ಯಾರನ್ನೋ ಓಲೈಕೆಗೆ 144ನೇ ಸೆಕ್ಷನ್ ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
 
ಕೊಲೆ ಮಾಡಿದವನು, ಕೊಲೆಗೆ ಸಂಚು ಮಾಡಿದವನು, ಕೊಲೆಗೆ ದುಷ್ಪ್ರೇರಣೆ ನೀಡಿದವನು, ಕೊಲೆ ಪ್ರಕರಣದ ಸಾಕ್ಷಿ ನಾಶ ಮಾಡುವವನು, ಕೊಲೆಯ ಸಾಕ್ಷ್ಯದ ದಿಕ್ಕು ತಪ್ಪಿಸುವವನು- ಈ ಎಲ್ಲ ಚಟುವಟಿಕೆಗಳು ಕೊಲೆಯ ಒಳಸಂಚಿನ ಭಾಗವೇ ಆಗುತ್ತದೆ. ಅದು ಒಬ್ಬ ಕೊಲೆಗಾರನ ಹೊಣೆಗಾರಿಕೆಯಷ್ಟೇ ಪ್ರಮುಖ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.
 
ಜನರಿಗೆ ತನಿಖಾ ಸಂಸ್ಥೆ, ಪೊಲೀಸ್ ಇಲಾಖೆ ಬಗ್ಗೆ ವಿಶ್ವಾಸ ಕಡಿಮೆ ಆಗಬಾರದು. ಇದು ಪೊಲೀಸ್ ಇಲಾಖೆಯ ಗುರುತರವಾದ ಜವಾಬ್ದಾರಿ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಆ ನಿಟ್ಟಿನಲ್ಲಿ ಎಸ್‍ಐಟಿ, ಪೊಲೀಸ್ ಠಾಣೆಗಳ ನಡವಳಿಕೆ ಜನರಲ್ಲಿ ವಿಶ್ವಾಸ ಮೂಡಿಸುವಂತೆ ಇರಬೇಕು ಎಂದು ಆಶಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ತಿರುಪತಿ ದೇವಾಲಯ ಹಿಂದೂಗಳಿಗೆ ಸೇರಿದ್ದು: ತಿರುಪತಿಯಲ್ಲಿ ಇನ್ಮೇಲೆ ಎಲ್ಲಾ ಚೇಂಜ್ ಮಾಡ್ತೀನಿ ಎಂದ ಚಂದ್ರಬಾಬು ನಾಯ್ಡು