ಶಾಶ್ವತ ನೀರಾವರಿ, ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್`ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಜನಜೀವನ, ಬಸ್ , ಆಟೋ, ವಾಹನ ಸಂಚಾರ ಸಾಮಾನ್ಯವಾಗಿದೆ. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಸುಗಮವಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಸಂಚಾರ ಸುಗಮವಾಗಿದೆ. ರಸ್ತೆಗಳೆಲ್ಲ ವಾಹನಗಳಿಂದ ತುಂಬಿ ತುಳುಕುತ್ತಿವೆ.
ಇತ್ತ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಬಂದ್ ಬಿಸಿ ತಟ್ಟಿದೆ. ಹಲವೆಡೆ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲಾಗಿದ್ದು, ಕನ್ನಡಪರ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇತ್ತ, ಹೋರಾಟದ ನೆಲ ನರಗುಂದದಲ್ಲಿ ಬಂದ್ ಬಿಸಿ ಜೋರಾಗಿದೆ ರಸ್ತೆ ತಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮನಗರ ಮತ್ತು ಕೋಲಾರದಲ್ಲಿ ಕಲ್ಲು ತೂರಾಟ ನಡೆಸಿದವರನ್ನ ಬಂಧಿಸಲಾಗಿದೆ.
ಉಳಿದಂತೆ ಬೇರೆ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್ ಎಫೆಕ್ಟ್ ಇಲ್ಲ. ರಾಜ್ಯಾದ್ಯಂತ ಶಾಲಾ ಕಾಲೇಜು, ಸರ್ಕಾರಿ ಕಚೇರಿ ಎಂದಿನಂತೆ ತೆರೆದಿವೆ.