Select Your Language

Notifications

webdunia
webdunia
webdunia
webdunia

ಕರ್ನಾಟಕಕ್ಕೆ ಯಾರೆಲ್ಲಾ ನೂತನ ಸಚಿವರು, ಇಂದು ರಾಹುಲ್ ಗಾಂಧಿ ಫೈನಲ್ ಕಾಲ್

Karnataka Congress
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಇಂದೂ ಕೂಡಾ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ರಾಹುಲ್ ಗಾಂಧಿ ಪಟ್ಟಿ ಫೈನಲ್ ಮಾಡಲಿದ್ದಾರೆ.

ಇತ್ತೀಚೆಗೆ ಜೆನ್ ಜಿ ಪ್ರತಿಭಟನೆ ಕಾಂಗ್ರೆಸ್ ನಾಯಕರನ್ನೂ ಜಾಗೃತಗೊಳಿಸಿದೆ. ಹೀಗಾಗಿ ಈಗ ಸಚಿವರ ಪಟ್ಟಿಯಲ್ಲಿ ಯುವ ನಾಯಕರಿಗೇ ಹೆಚ್ಚು ಪ್ರಾತಿನಿಧ್ಯ ನೀಡಲಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ಅಂತಿಮ ಸುತ್ತಿನ ಸಭೆ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ದೆಹಲಿಯಲ್ಲಿದ್ದು, ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ.

ಮುಂಬರುವ ಶಾಸನಸಭೆಯ ಮುಂಗಾರು ಅಧಿವೇಶನಕ್ಕೂ ಮುನ್ನ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳುತ್ತಿದೆ. ಹೈಕಮಾಂಡ್ ಸಭೆಯಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಿದ ತಕ್ಷಣ, ಪಟ್ಟಿಯನ್ನು ರಾಜಭವನಕ್ಕೆ ರವಾನಿಸಲಾಗುತ್ತದೆ. ತದನಂತರ ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಕ್ರೋಚ್ ಪಾರ್ಟಿ ಸುಪ್ರೀಂಕೋರ್ಟ್ ನಿಂದಲೂ ದೊಡ್ಡವರೇ: ಸೌರವ್ ದಾಸ್ ಹೇಳಿಕೆಗೆ ನೆಟ್ಟಿಗರ ಕಿಡಿ video