ಮುಖ್ಯಮಂತ್ರಿ ಸಿದ್ದರಾಮಯ್ಯ ಅವನತಿಯಾಗಲು ದಿನೇಶ್ ಅಮೀನ್ ಮಟ್ಟು ಸಾಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇಗುಲವನ್ನು ಸಮಾಧಿ ಎನ್ನುವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಅಮೀನ್ಮಟ್ಟು ಅವರನ್ನು ಬಂಧಿಸಿ ಎಂದು ಬಿಜೆಪಿ ಹೇಳಿರುವುದು ಸರಿಯಾಗಿದೆ ಎಂದರು.
ಗಾಂಧಿ ಕುಟುಂಬ ಎಲ್ಲರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದೆ. ಗಾಂಧಿ ಕುಟುಂಬದಿಂದಲೇ ಕಾಂಗ್ರೆಸ್ ಪಕ್ಷ ಅಸ್ಥಿತ್ವದಲ್ಲಿರುವುದು. ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿಸುವ ವಿಚಾರದಿಂದ ಬಿಜೆಪಿ ಆತಂಕಕ್ಕೊಳಗಾಗಿದೆ ಎಂದು ಲೇವಡಿ ಮಾಡಿದರು.
ಇಂದಿರಾಗಾಂಧಿಯವರು ತುರ್ತುಪರಿಸ್ಥಿತಿ ಹೇರಿದ ನಂತರ ಆಗಿದ್ದು ಮೋದಿಯವರಿಗಾಗಬೇಕೇ ಎಂದು ಅಮೀನ್ ಮಟ್ಟು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಸಂದೇಶ ಪೋಸ್ಟ್ ಮಾಡಿದ ನಂತರ ಬಿಜೆಪಿ ಮುಖಂಡರು ಗರಂ ಆಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ