ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಯುತ್ತಿರುವಾಗಲೇ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದು ಭಾರಿ ಕೋಲಾಹಲಕ್ಕೆ ಕಾರಣವಾಗಿದೆ.
ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ, ನಂತರ ಮೇಲ್ಮನವಿ ಸಲ್ಲಿಸಲು ಅವಕಾಶ ವಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರಕಾರ, ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವುದು ಅನಿವಾರ್ಯವಾಗಿದೆ. ಅದರಂತೆ, ಇಂದು ಸರ್ವ ಪಕ್ಷ ಸಭೆ ನಡೆಯುತ್ತಿರುವಾಗಲೇ ತಮಿಳುನಾಡಿಗೆ ನೀರು ಹರಿಸಿರುವುದು ಕಾವೇರಿ ಹೋರಾಟಗರರಲ್ಲಿ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ