Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ: ಸಿದ್ದುಗೆ ಶುರುವಾಯ್ತು ಸಂಕಷ್ಟ

Siddaramaiah

Krishnaveni K

ಬೆಂಗಳೂರು , ಶನಿವಾರ, 17 ಆಗಸ್ಟ್ 2024 (10:57 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಸಿದ್ದುಗೆ ಸಂಕಷ್ಟ ಶುರುವಾಗಿದೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ರಾಜ್ಯಪಾಲರಿಗೆ ಅನೇಕ ದೂರು ಬಂದಿತ್ತು. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಸಿಎಂಗೆ ಸದ್ಯದಲ್ಲೇ ಆದೇಶದ ಪ್ರತಿ ಸಿಗಲಿದೆ.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದು, ಮುಂದಿನ ಕಾನೂನು ಹೋರಾಟಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.  ಸಿಎಂ ಸಿದ್ದರಾಮಯ್ಯ ಜೊತೆಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಗೂ ಮಾಹಿತಿ ನೀಡಲಾಗುತ್ತದೆ. ಈ ಸಂಬಂಧ ಸಿಎಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯಿದೆ.

ಇನ್ನು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿದೆ. ಬಿಜೆಪಿ ರಾಜಭವನದ ದುರ್ಬಳಕೆ ಮಾಡುತ್ತಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಶೋಕಾಸ್ ನೋಟಿಸ್ ಗೆ ಉತ್ತರ ನೀಡಿರುವಾಗ ಈಗ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಅಗತ್ಯವೇನಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಡವರಿಗಾಗಿ 5 ರೂ ಊಟ: ಹಳೆಯ ಯೋಜನೆಗೆ ಮತ್ತೆ ಚಾಲನೆ ಕೊಟ್ಟ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು